ರಾಜಕೀಯರಾಜ್ಯ

ಸಚಿವ ಸುಧಾಕರ್ ನಿಧನ



ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್(66.ವ) ಅವರು ಮೇ.10ರಂದು ನಸುಕಿನ ಜಾವ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.


ಮಣಿಪಾಲ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 3:15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಡಿ. ಸುಧಾಕರ್ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಗಿದ್ದರು.

 

ಸಚಿವ ಸುಧಾಕರ್ ನಿಧನಕ್ಕೆ ವಿವಿಧ ಗಣ್ಯರು ಮತ್ತು ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ. ಡಿ. ಸುಧಾಕರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ ನಡೆಯಲಿದೆ.

Leave a Reply

Your email address will not be published. Required fields are marked *

error: Content is protected !!