ಬೆಳ್ತಂಗಡಿ: ಕ್ಯಾಂಟೀನ್‌ನಲ್ಲಿ ವೇಶ್ಯಾವಾಟಿಕೆ ಜಾಲದ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ
ಬೆಳ್ತಂಗಡಿ: ಅಕ್ರಮವಾಗಿ ಲಾಭ ಗಳಿಸುವ ಉದ್ದೇಶದಿಂದ ಕ್ಯಾಂಟೀನ್‌ನ ಕೋಣೆಯೊಂದರಲ್ಲಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಳ್ತಂಗಡಿ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ‘ಪವನ್’ ಎಂಬ ಹೆಸರಿನ ಕ್ಯಾಂಟೀನ್‌ನಲ್ಲಿ ಈ ಕೃತ್ಯ ನಡೆಯುತ್ತಿತ್ತು. ಕ್ಯಾಂಟೀನ್ ಮಾಲೀಕ ಸುಂದರ್ ಶೆಟ್ಟಿ ಎಂಬವರು ತನ್ನ ಪರಿಚಯದ ಉಸ್ಮಾನ್ ಎಂಬವರೊಂದಿಗೆ ಸೇರಿಕೊಂಡು, ಕ್ಯಾಂಟೀನ್ ಒಳಗಿನ ಕೋಣೆಯಲ್ಲಿ ಮಹಿಳೆಯರನ್ನು ಕರೆಸಿಕೊಂಡು ಅಕ್ರಮ ಚಟುವಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ (ತನಿಖೆ) ಸಿಕಂದರ್ ಪಾಷಾ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಬಂದ ತಕ್ಷಣ ಗುಪ್ತವಾಗಿ ಪರಿಶೀಲನೆ ನಡೆಸಿದಾಗ ಅಕ್ರಮ ಚಟುವಟಿಕೆ ನಡೆಯುತ್ತಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ, ಮೇ 10ರರಂದು ಸಂಜೆ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್. ಅವರ ನೇತೃತ್ವದಲ್ಲಿ ಪೊಲೀಸರ ತಂಡ ಕ್ಯಾಂಟೀನ್ ಮೇಲೆ ದಾಳಿ ನಡೆಸಿದೆ.
ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ:




