ಗೃಹ ಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು?
ಬೆಳಗಾವಿ: ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದ್ದು ಈ ಯೋಜನೆಯಡಿಯಲ್ಲಿ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡಲಾಗುತ್ತದೆ. ಬಾಕಿ ಉಳಿದ ಕಂತಿನ ಹಣ ಬಿಡುಗಡೆ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತಾಡಿದ್ದು, ಮಾಹಿತಿ ನೀಡಿದ್ದಾರೆ.

ಗೃಹಲಕ್ಷ್ಮೀ ಯೋಜನೆಯ ಮಾರ್ಚ್ ತಿಂಗಳ ಬಾಕಿ ಉಳಿದಿರುವ ಕಂತು ಇನ್ನು ನಾಲೈದು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ತಿಳಿಸಿದ್ದಾರೆ.
ಏಪ್ರಿಲ್ ತಿಂಗಳ ಕಂತು ಕೂಡ ಇನ್ನು ಹತ್ತು ದಿನಗಳೊಳಗೆ ಫಲಾನುಭವಿಗಳಿಗೆ ತಲುಪಲಿದೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದರು.




