ರಾಜ್ಯ

ಟ್ಯಾಂಕರ್ ಡಿಕ್ಕಿ ಹೊಡೆದು ಸೇತುವೆ ಕೆಳಗೆ ಬಿದ್ದ ಟ್ರ್ಯಾಕ್ಟರ್: ಮಗು ಸೇರಿದಂತೆ ಆರು ಮಂದಿ ಸಾವು

ಹಿಂಬದಿಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದಿದ್ದು, ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ.


ಮೃತರನ್ನು ಸಂಡೂರು ತಾಲೂಕಿನ ಯಶವಂತ ನಗರ ಹಾಗೂ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಕೊಪ್ಪಳದ ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಜರುಗಿದೆ. ಅಪಘಾತದ ತೀವ್ರತೆಗೆ ಟ್ರ್ಯಾಕ್ಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಸ್ಥಳದಲ್ಲಿ ಕಿರುಚಾಟ ಮತ್ತು ಆಕ್ರಂದನ ಮುಗಿಲು ಮುಟ್ಟಿದೆ.

 


ದೇವಿಯ ದರ್ಶನ ಪಡೆದು ಪುನೀತರಾಗಬೇಕೆಂದು ಹೊರಟಿದ್ದ ಭಕ್ತರು ವಿಧಿಯ ಕರಾಳ ಆಟಕ್ಕೆ ಸಿಲುಕಿ ಸಾವಿನ ಮನೆ ಸೇರಿದ್ದಾರೆ. ಗಾಯಾಳುಗಳ ಸ್ಥಿತಿ ಕೂಡ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!