NEET UG ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ SSF ಉಪ್ಪಿನಂಗಡಿ ಡಿವಿಷನ್ ವತಿಯಿಂದ ಟಾರ್ಚ್ ಲೈಟ್ ಮಾರ್ಚ್
ಉಪ್ಪಿನಂಗಡಿ: NEET UG ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ SSF ಉಪ್ಪಿನಂಗಡಿ ಡಿವಿಷನ್ ವತಿಯಿಂದ ಟಾರ್ಚ್ ಲೈಟ್ ಮಾರ್ಚ್ ಪ್ರತಿಭಟನೆ ಮೇ.16ರಂದು ನಡೆಯಿತು.

ಸಂಜೆ 7 ಗಂಟೆಗೆ ಹಳೇ ಬಸ್‌ಸ್ಟ್ಯಾಂಡ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ, ಹೊಸ ಬಸ್‌ಸ್ಟ್ಯಾಂಡ್ ತನಕ ಸಾಗಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಕೈಯಲ್ಲಿ ಟಾರ್ಚ್ ಲೈಟ್ ಹಿಡಿದು ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಹೊಸ ಬಸ್ ತಂಗುದಾಣದಲ್ಲಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ SSF ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ ಹಾಗೂ MM ಮಹ್ರೂಫ್ ಆತೂರು, ಶಿಕ್ಷಣ ವ್ಯವಸ್ಥೆಯ ಪಾವಿತ್ರ್ಯ ಹಾಳು ಮಾಡುವ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ SSF ಉಪ್ಪಿನಂಗಡಿ ಡಿವಿಷನ್ ಅಧ್ಯಕ್ಷ ಅತಾವುಲ್ಲ ಹಿಮಮಿ ಸ್ವಾಗತಿಸಿದರು. ಕಾರ್ಯದರ್ಶಿ ಆದಂ ನಿಜಾಮ್ ಪದ್ಮುಂಜಾ ವಂದಿಸಿದರು.
ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.





