ವಿಟ್ಲ: ಅಕ್ರಮ ಮರಳು ಸಾಗಾಟ, ಪಿಕ್ ಅಪ್ ವಾಹನ ವಶ, ಪ್ರಕರಣ ದಾಖಲು
ವಿಟ್ಲ: ಮೇ.18ರಂದು ರಾತ್ರಿ, ವಿಟ್ಲ ಕುಡ್ತಮುಗೇರು ಎಂಬಲ್ಲಿರುವ ಹೊಳೆಯಿಂದ ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ಎಸ್ಐ ರಾಮಕೃಷ್ಣ ಅವರಿಗೆ ಮಾಹಿತಿ ಬಂದ ಮೇರೆಗೆ, ಅವರು ಠಾಣಾ ಸಿಬ್ಬಂದಿಗಳೊಂದಿಗೆ ಬಂಟ್ವಾಳ ಕನ್ಯಾನ ಗ್ರಾಮದ ಬೈರಿಕಟ್ಟೆ ಎಂಬಲ್ಲಿ ಸದ್ರಿ ಪಿಕ್ ಅಪ್ ವಾಹನವನ್ನು ತಡೆದು ಪರಿಶೀಲಿಸಿದಾಗ ಮರಳು ಲೋಡ್ ಮಾಡಿರುವುದು ಕಂಡು ಬಂದಿರುತ್ತದೆ.

ಈ ಬಗ್ಗೆ ವಾಹನದ ಚಾಲಕ ಬಂಟ್ವಾಳ ಕೊಳ್ನಾಡು ನಿವಾಸಿ ರೆನೋಲ್ ಮೆಲ್ರೋಯ್ ಡಿಸೋಜ (31) ಎಂಬವರನ್ನು ವಿಚಾರಿಸಿದಾಗ ಯಾವುದೇ ಪರವಾನಿಗೆ ಅಥವಾ ದಾಖಲಾತಿಗಳು ಇಲ್ಲದೇ ಮಾರಳು ಸಾಗಿಸುತ್ತಿರುವುದಾಗಿ ತಿಳಿಸಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ಸದ್ರಿ ಪಿಕ್ ಅಪ್ ವಾಹನವನ್ನು ಮರಳಿನ ಸಮೇತವಾಗಿ ಸ್ವಾಧೀನಪಡಿಸಿ, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.




