ಕೇರಳ: ಕೆಎಸ್‌ಆರ್‌ಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ
ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ವಿ ಡಿ ಸತೀಶನ್ ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಕೆಎಸ್‌ಆರ್‌ಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆಯನ್ನು ಈಡೇರಿಸಿದ್ದಾರೆ.

ವಿ ಡಿ ಸತೀಶನ್ ಅವರು ಸೋಮವಾರ ಕೇರಳ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ಕ್ಷಣಗಳಲ್ಲಿ ರಾಜ್ಯದ ಮಹಿಳೆಯರಿಗೆ ಬಂಪರ್ ಗಿಫ್ಟ್ ನೀಡಿದ್ದು, ಮೊದಲ ಸಚಿವ ಸಂಪುಟ ಸಭೆಯಲ್ಲೇ ಯುಡಿಎಫ್ ಸರ್ಕಾರವು ತನ್ನ ಪ್ರಮುಖ ಚುನಾವಣಾ ಭರವಸೆಗಳನ್ನು ಈಡೇರಿಸಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ನಿರ್ಧಾರಗಳನ್ನು ಪ್ರಕಟಿಸಿದ ಮುಖ್ಯಮಂತ್ರಿ ವಿ ಡಿ ಸತೀಶನ್, ಜೂನ್ 15 ರಿಂದ ಮಹಿಳೆಯರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದರು.




