ಕರಾವಳಿಕ್ರೈಂ

ಬೆಳ್ತಂಗಡಿ: ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ-ಮೂವರು ಯುವಕರು ಪೊಲೀಸ್ ವಶಕ್ಕೆ

ಬೆಳ್ತಂಗಡಿ: ಜಲಪಾತದ ಬಳಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೂವರು ಯುವಕರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ.

ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು, ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರೊಂದಿಗೆ ಮೇ.20ರಂದು ಬೆಳ್ತಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಜಲಪಾತಕ್ಕೆ ತೆರಳಿದ್ದು ಈ ವೇಳೆ ಯುವಕರು, ತಮ್ಮೊಂದಿಗಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದು  ಸಂತ್ರಸ್ಥ ಯುವತಿಯರು ಪ್ರತಿರೋಧಿಸಿದ್ದಾರೆ, ಈ ವೇಳೆ ಸ್ಥಳದಲ್ಲಿದ್ದ ಜನರು ಯುವಕರನ್ನು ತಡೆದು, ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸದ್ರಿ ಮೂವರು ಯುವಕರನ್ನು ಪೊಲೀಸರು ಬೆಳ್ತಂಗಡಿ ಠಾಣೆಗೆ ಕರೆತಂದಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ:60/2026 ರಂತೆ  ಪ್ರಕರಣ ದಾಖಲಿಸಲಾಗಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!