ಲೋಪವಿಲ್ಲದೆ ನೀಟ್, ಯುಜಿ ಮರು ಪರೀಕ್ಷೆ-ಸಚಿವ ಧರ್ಮೇಂದ್ರ ಪ್ರಧಾನ್

ಜೂ.21ರಂದು ನೀಟ್-ಯುಜಿ ಮರು ಪರೀಕ್ಷೆಯನ್ನು
ಯಾವುದೇ ಲೋಪವಿಲ್ಲದೆ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ ನೀಡಿದ್ದಾರೆ.
ವೈದ್ಯಕೀಯ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಇದೇ ಮೇ 3ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯನ್ನು ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಕಾರಣಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ರದ್ದುಗೊಳಿಸಿತ್ತು. ನೀಟ್-ಯುಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕಾಯಿತು. ಓರ್ವ ಅರ್ಹ ವಿದ್ಯಾರ್ಥಿಯೂ ಸೀಟು ಕಳೆದುಕೊಳ್ಳಬಾರದು ಎಂದು ಅವರು ಹೇಳಿದ್ದಾರೆ. ಜೂನ್ 21ರಂದು ನಡೆಯಲಿರುವ ಮರು ಪರೀಕ್ಷೆಯು ಶೇ 100ರಷ್ಟು ದೋಷ ಮುಕ್ತವಾಗಿರಲಿದೆ ಎಂದರು.




