ಮಾಣಿ ಸಮೀಪ ಭೀಕರ ಅಪಘಾತ: ಕಲ್ಲರ್ಪೆ ನಿವಾಸಿ ದ್ವಿಚಕ್ರ ಸವಾರ ಮೃತ್ಯು
ಪುತ್ತೂರು: ಮಾಣಿ ಸಮೀಪ ಮೇ.25ರಂದು ಲಾರಿ ಹಾಗೂ ದ್ವಿಚಕ್ರ ವಾಹನ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟಿದ್ದಾರೆ.

ಲಾರಿಯ ಹಿಂಭಾಗಕ್ಕೆ ಡಿಯೋ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸವಾರ ಕಲಂದರ್ ಶಾ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೂಲತಃ ಸುಳ್ಯ ನಿವಾಸಿಯಾಗಿದ್ದು, ಪ್ರಸ್ತುತ ಪುತ್ತೂರು ಸಂಟ್ಯಾರ್ ಸಮೀಪದ ಕಲ್ಲರ್ಪೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮಂಗಳೂರು ಧಕ್ಕೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.




