ಪುತ್ತೂರು: ವಿದ್ಯುತ್ ಶಾಕ್ನಿಂದ ಯುವಕ ಮೃತ್ಯು
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಮೇ 24ರಂದು ರಾತ್ರಿ ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ಸಂಭವಿಸಿದೆ.

ಬೇಲೂರಿನ ಅಂಕಿಹಳ್ಳಿ ನಿವಾಸಿ ಜೋಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29) ಮೃತಪಟ್ಟ ಯುವಕ.
ಜೋಕಿಂ ಅವರು ಪತ್ನಿ ಇಬ್ಬರು ಮಕ್ಕಳೊಂದಿಗೆ ಅವರ ಮಾವನ ಮನೆ ನಿಡಳ್ಳಿಯ ಬೋಳುಂಬುಡೆಗೆ ಬಂದಿದ್ದರು. ರೋಶನ್ ರಾತ್ರಿ ಸ್ಥಾನ ಮುಗಿಸಿ ಬಟ್ಟೆ ಒಗೆಯುವ ಸ್ಥಳಕ್ಕೆ ಹೋದಾಗ ಅಲ್ಲಿದ್ದ ವಿದ್ಯುತ್ ವಯರ್ ನಿಂದ ಶಾಕ್ ಹೊಡೆದು ನೆಲಕ್ಕೆ ಬಿದ್ದಿರುವುದಾಗಿ ತಿಳಿದು ಬಂದಿದೆ.
ಗಂಭೀರ ಗಾಯಗೊಂಡ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಮೃತರು ವಿದೇಶದಲ್ಲಿ ಉದ್ಯೋಗದಲ್ಲಿದ್ದು, ರಜೆಯಲ್ಲಿ ಊರಿಗೆ ಬಂದಿದ್ದರು ಎನ್ನಲಾಗಿದೆ. ಅವರು ತಂದೆ ತಾಯಿ, ತಂಗಿಯನ್ನು ಅಗಲಿದ್ದಾರೆ.





