ಬೆಳ್ತಂಗಡಿ: ಬಾಲಕಿ ಆತ್ಮಹತ್ಯೆ
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿರ್ಯೋವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.1ರಂದು ಬೆಳಗ್ಗೆ ಬೆಳ್ತಂಗಡಿಯಲ್ಲಿ ನಡೆದಿದೆ.

15 ವರ್ಷದ ವಿದ್ಯಾರ್ಥಿನಿ ಮನೆಯೊಳಗೆ ತನ್ನ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿ ಕೊಠಡಿಯ ಬಾಗಿಲು ತೆರೆಯದಿದ್ದಾಗ ಮನೆಯವರು ಕಿಟಕಿಯ ಮೂಲಕ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಬಾಲಕಿ ಆತ್ಮಹತ್ಯೆಯಲ್ಲಿ ಸಂಶಯವಿರುವುದಾಗಿ ಪೋಷಕರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.






