ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಡಿಕೆಶಿ

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಜೂ.3ರಂದು ರಾಜ್ಯದ ಕರ್ನಾಟಕ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಇಂದು ಸಂಜೆ ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ.






