ಮಧುರಾ ಇಂಟರ್‌ನ್ಯಾಷನಲ್ ಸ್ಕೂಲ್ ನಲ್ಲಿ ವಿಶ್ವ ಪರಿಸರ ದಿನಾಚರಣೆ
ಪುತ್ತೂರು: ಮೇನಾಲ ಮಧುರಾ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್ ಅವರು ಮುಖ್ಯ ಶಿಕ್ಷಕಿ ಪುಷ್ಪಲತಾ ರಾವ್ ಅವರಿಗೆ ಸಸಿಯನ್ನು ನೀಡಿ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಶಿಕ್ಷಕಿ ಪುಷ್ಪಲತಾ ರಾವ್ ಅವರು ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ಮಾತನಾಡಿದರು. ಅಬ್ದುಲ್ ರಹಿಮಾನ್ ಅವರು ವಿಶ್ವ ಪರಿಸರ ದಿನದ ಮಹತ್ವವನ್ನು ವಿವರಿಸಿದರು. ಶಿಕ್ಷಕಿ ಅಂಜಲಿ ಅವರು ಪರಿಸರವನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಸಸಿಗಳನ್ನು ನೆಟ್ಟು ಹಸಿರು ಪರಿಸರದ ಮಹತ್ವವನ್ನು ಸಾರಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಜುಬೈದಾ ಸ್ವಾಗತಿಸಿದರು. ಸುಮಯ್ಯ ವಂದಿಸಿದರು. ಫಾತಿಮತ್ ಶಫ್ರೀನಾ ಕಾರ್ಯಕ್ರಮ ನಿರೂಪಿಸಿದರು.





