ಪ್ರಧಾನಿಯಾಗಿ ಸುಧೀರ್ಘ ಆಡಳಿತ: ದಾಖಲೆ ಬರೆದ ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಸತತ 4,399 ದಿನಗಳ ಆಡಳಿತವನ್ನು ಪೂರ್ಣಗೊಳಿಸಿದ್ದು, ಈ ಮೂಲಕ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ದಾಖಲೆ ಬರೆದಿದ್ದಾರೆ.

2014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರು ಇಂದಿಗೆ 4,399 ದಿನಗಳ ನಿರಂತರ ಅಧಿಕಾರಾವಧಿಯನ್ನ ಪೂರೈಸಿದ್ದಾರೆ. ಪ್ರಧಾನಿಯಾಗಿ ಸತತ 4,399 ದಿನಗಳ ಆಡಳಿತ ನಡೆಸುವ ಮೂಲಕ ಪ್ರಧಾನಿ ಮೋದಿ ಅವರು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 4,398 ದಿನಗಳ ದಾಖಲೆಯನ್ನ ಮುರಿದಿದ್ದಾರೆ. ಇದರೊಂದಿಗೆ ಮೋದಿ ಅವರು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ





