ಪೋಕ್ಸೋ ಪ್ರಕರಣ: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ನರಿಮೊಗರು ನಿವಾಸಿ ಆರೋಪಿಯ ಬಂಧನ
ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ, ಪುತ್ತೂರು ತಾಲೂಕಿನ ನರಿಮೊಗರು ನಿವಾಸಿ ನಮನ್ ನಾಯಕ್ (32) ಎಂಬಾತನನ್ನು ಪುತ್ತೂರು ನಗರ ಪೊಲೀಸರು ಬೆಂಗಳೂರಿನ ಕೂಡ್ಲುಪೇಟೆ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.





