ಕರಾವಳಿಕ್ರೈಂ

ಬೆಳ್ತಂಗಡಿ: ಮಹಿಳೆಯ ಅತ್ಯಾಚಾರ, ಆರೋಪಿ ಅರೆಸ್ಟ್


ಬೆಳ್ತಂಗಡಿ: ಧರ್ಮಸ್ಥಳ ಠಾಣಾ ವ್ಯಾಪ್ತಿಯ ನಿವಾಸಿಯಾದ ಸಂತ್ರಸ್ಥ ಮಹಿಳೆಯು 2023ರಲ್ಲಿ ರಾತ್ರಿ ವೇಳೆ, ತನ್ನ ಮನೆಯಲ್ಲಿ ಒಬ್ಬಳೇ ಇರುವಾಗ, ಸದ್ರಿಯವರ ಸಂಬಂಧಿಕನಾದ ಆರೋಪಿ ಸುರೇಶ್ ಎಂಬಾತನು, ಮನೆಗೆ ಬಂದು ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿರುವುದಾಗಿ ಜೂ.7ರಂದು ನೀಡಿದ ದೂರಿನ ಮೇರೆಗೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:41/2026, ಕಲಂ: 376, 506 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸಾಂದರ್ಭಿಕ ಚಿತ್ರ

ಸದ್ರಿ ಪ್ರಕರಣದ ತನಿಖೆ ನಡೆಸಲಾಗಿ ಆರೋಪಿಯನ್ನು  ವಶಕ್ಕೆ ಪಡೆದು ಜೂ.9ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,  ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

 

Leave a Reply

Your email address will not be published. Required fields are marked *

error: Content is protected !!