ಸುಳ್ಯ : ವಿದ್ಯಾರ್ಥಿನಿ ಅಭಿಜ್ಞಾ ಭಟ್ ನಿಧನ
ಸುಳ್ಯ: ನಗರದ ಖ್ಯಾತ ಇಎನ್‌ಟಿ ತಜ್ಞ ವೈದ್ಯರಾದ ಡಾ. ರವಿಶಂಕರ್ ಅವರ ಹಿರಿಯ ಪುತ್ರಿ ಅಭಿಜ್ಞಾ ಭಟ್ ಅವರು ಅಲ್ಪಕಾಲದ ಅಸೌಖ್ಯದಿಂದ ಜೂ. 10ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅಭಿಜ್ಞಾ ಭಟ್ ಅವರು ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 596 ಅಂಕಗಳನ್ನು ಪಡೆದು ರಾಜ್ಯದಲ್ಲಿ 4ನೇ ರ‍್ಯಾಂಕ್ ಗಳಿಸುವ ಮೂಲಕ ಗಮನ ಸೆಳೆದಿದ್ದರು. ಅತ್ಯುತ್ತಮ ಶೈಕ್ಷಣಿಕ ಸಾಧನೆಯ ಮೂಲಕ ಭವಿಷ್ಯದ ಭರವಸೆಯ ವಿದ್ಯಾರ್ಥಿನಿಯಾಗಿ ಗುರುತಿಸಿಕೊಂಡಿದ್ದ ಅಭಿಜ್ಞಾ ಅವರ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು, ಸ್ನೇಹಿತರು, ಶಿಕ್ಷಕರು ಸಂತಾಪ ಸೂಚಿಸಿದ್ದಾರೆ.




