ವಿಟ್ಲ: ಝುಬೈರ್ ನಿಧನ
ವಿಟ್ಲ: ಕಂಬಳಬೆಟ್ಟು ನೆಕ್ಕರೆ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಝುಬೈರ್(27) ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಾನುವಾರ ನಿಧನರಾದರು.

ಝುಬೈರ್ ದುಬೈಯಲ್ಲಿ ಉದ್ಯೋಗದಲ್ಲಿದ್ದು, ಅಲ್ಲಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದರು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.




