ಪುತ್ತೂರಿನ ಸತ್ಯಸಾಯಿ ಆಸ್ಪತ್ರೆಯಲ್ಲಿರುವ ‘ಬ್ರೈಟ್ ಪ್ಯಾರಾಮೆಡಿಕಲ್’ ಕಾಲೇಜಿನಲ್ಲಿ ಮುಂದುವರಿದ ದಾಖಲಾತಿ
ಪುತ್ತೂರು: ವೈದ್ಯಕೀಯ ಕ್ಷೇತ್ರದಲ್ಲಿ ಬಹುಬೇಡಿಕೆಯಿರುವ ಪ್ಯಾರಾಮೆಡಿಕಲ್ ಕೋರ್ಸ್ ಕಲಿಯಲು ಆಸಕ್ತಿಯಿರುವವರಿಗೆ ’ಬೈಟ್ ಪ್ಯಾರಾಮೆಡಿಕಲ್ ಕಾಲೇಜು’ ಸವರ್ಣಾವಕಾಶವನ್ನು ಒದಗಿಸುತ್ತಿದೆ. ಪುತ್ತೂರಿನ ಸತ್ಯಸಾಯಿ ಆಸ್ಪತ್ರೆಯಲ್ಲಿ ಕಾರ್ಯಾಚರಿಸುತ್ತಿರುವ ಬೈಟ್ ಪ್ಯಾರಾಮೆಡಿಕಲ್ ಕಾಲೇಜು ಅರೆ ವೈದ್ಯಕೀಯ ಕ್ಷೇತ್ರದಲ್ಲಿರುವ ಕೋರ್ಸ್‌ಗಳನ್ನು ನಡೆಸುತ್ತಿದ್ದು ಇಲ್ಲಿ ಕಲಿತ ಹಲವಾರು ಮಂದಿ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದಾರೆ.

ಕಳೆದ 7 ವರ್ಷಗಳಿಂದ ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಈ ಸಂಸ್ಥೆಯಲ್ಲಿ ಈಗಾಗಲೇ ನೂರಾರು ವಿದ್ಯಾರ್ಥಿಗಳು ಕಲಿತು ಉದ್ಯೋಗದಲ್ಲಿದ್ದಾರೆ. ಅಲ್ಲದೇ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗವಕಾಶಗಳನ್ನು ಪಡೆದುಕೊಂಡಿದ್ದು ಸರಕಾರಿ, ಖಾಸಗೀ ಹಾಗೂ ಸ್ವಉದ್ಯೋಗ ಮಾಡುವ ಅವಕಾಶವನ್ನು ಕಲ್ಪಿಸುವಲ್ಲಿ ಈ ಸಂಸ್ಥೆ ಯಶಸ್ವಿಯಾಗಿದೆ. ಗುಣಮಟ್ಟದ ಶಿಕ್ಷಣವನ್ನು ನೀಡುವ ಉತ್ತಮ ಫಲಿತಾಂಶವನ್ನು ಪಡೆದುಕೊಂಡಿರುವ ಬೈಟ್ ಪ್ಯಾರಾಮೆಡಿಕಲ್ ಕಾಲೇಜು ಕೆಲವೇ ವರ್ಷಗಳಲ್ಲಿ ಅತ್ಯುತ್ತಮ ಹೆಸರನ್ನು ಸಂಪಾದಿಸುವಲ್ಲಿ ಯಶಸ್ವಿಯಾಗಿದೆ.

ಎಸ್ಸೆಸ್ಸೆಲ್ಸಿ ಪಾಸ್ ಆದವರು, ಪ್ರಥಮ/ದ್ವಿತೀಯ ಪಿಯುಸಿ ಪಾಸ್/ಫೇಲ್ ಆದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಇಲ್ಲಿ ಪ್ರವೇಶ ಪಡೆಯಬಹುದಾಗಿದೆ.
ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ, ಆಪರೇಷನ್ ಥಿಯೇಟರ್ ಟೆಕ್ನಾಲಜಿ, ಅನಸ್ತೇಷಿಯಾ ಟೆಕ್ನಾಲಜಿ ಮುಂತಾದ ಅತೀ ಬೇಡಿಕೆಯಿರುವ ಕೋರ್ಸುಗಳು ಇಲ್ಲಿ ಲಭ್ಯವಿದೆ. ಆರ್ಥಿಕವಾಗಿ ಕಷ್ಟದಲ್ಲಿರುವವರು ಕಂತುಗಳ ಮೂಲಕವೂ ಫೀಸ್ ಪಾವತಿಸಲು ಸಂಸ್ಥೆ ಅವಕಾಶ ನೀಡುತ್ತಿದ್ದು ಇದು ವಿದ್ಯಾರ್ಥಿಗಳ ಪಾಲಿಗೆ ಬಹು ಉಪಯುಕ್ತವಾಗಿದೆ.
ದಾಖಲಾತಿಗಾಗಿ ಸಂಪರ್ಕಿಸಿ:
ಸಂಸ್ಥೆಯಲ್ಲಿ ಈಗಾಗಲೇ 2026-27ನೇ ಸಾಲಿನ ದಾಖಲಾತಿ ನಡೆಯುತ್ತಿದ್ದು ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ. ಆಸಕ್ತರು ಕೂಡಲೇ ಸಂಸ್ಥೆಯನ್ನು ಸಂಪರ್ಕಿಸುವಂತೆ ಬೈಟ್ ಪ್ಯಾರಾಮೆಡಿಕಲ್ ಕಾಲೇಜಿನ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9686837228, 08251-298228, 7619237228 ನಂಬರನ್ನು ಸಂಪರ್ಕಿಸಬಹುದಾಗಿದೆ.




