ಕರಾವಳಿಕ್ರೈಂ

ಪುತ್ತೂರು: ಕಳ್ಳತನ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ

ಪುತ್ತೂರು: ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ  ಆರೋಪಿಯಾದ ಪುತ್ತೂರು ಚಿಕ್ಕಮುಡ್ನೂರು ನಿವಾಸಿ ಮೊಹಮ್ಮದ್   ಸಲಾಂ  @ K. M. ಸಲಾಂ  @ ಡಾಲರ್ ಸಲಾಂ ಎಂಬಾತನು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನನ್ನು ವಿಟ್ಲ ಠಾಣಾ ಪೊಲೀಸರು ಜೂ.16ರಂದು  ಪುತ್ತೂರು ರೈಲ್ವೆ ನಿಲ್ದಾಣದ ಬಳಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,  ನ್ಯಾಯಾಲಯವು ಆರೋಪಿಗೆ  ನ್ಯಾಯಾಂಗ   ಬಂಧನ ವಿಧಿಸಿದೆ.


ಆರೋಪಿ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ: 45/2023, ಕಲಂ: 353, 332, 504 ಐ.ಪಿ.ಸಿ ಪ್ರಕರಣ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ವಾರೆಂಟ್ ಜಾರಿಯಾಗಿರುತ್ತದೆ.

 

Leave a Reply

Your email address will not be published. Required fields are marked *

error: Content is protected !!