ಕರಾವಳಿ

ಮೇನಾಲದಲ್ಲಿ ಚಿರತೆ!?


ಪುತ್ತೂರು: ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪ ಗುರುವಾರ ರಾತ್ರಿ ಚಿರತೆಯೊಂದು ರಸ್ತೆ ದಾಟಿದೆ ಎಂದು ವ್ಯಕ್ತಿಯೊಬ್ಬರು ತಿಳಿಸಿದ್ದಾರೆ ಎನ್ನಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಚಿರತೆಯ ಫೋಟೋ ವೈರಲ್ ಆಗಿದೆ.

ಸಾಂದರ್ಭಿಕ ಚಿತ್ರ

ಗ್ರಾಮಸ್ಥರೋರ್ವರು ಮನೆಗೆ ಬರುವಾಗ ಮೇನಾಲ ಎಂಬಲ್ಲಿ ಚಿರತೆಯೊಂದು ಮುಖ್ಯ ರಸ್ತೆಯನ್ನು ದಾಟುವುದನ್ನು ನೋಡಿ, ತಕ್ಷಣ ಸ್ಥಳೀಯರಿಗೆ ಮಾಹಿತಿ ನೀಡಿ ಜಾಗ್ರತೆಯಿಂದ ಇರುವಂತೆ ತಿಳಿಸಿದ್ದಾರೆ ಎನ್ನಲಾಗಿದೆ. ಈ ವಿಚಾರದ ಫೋಟೋ, ವಿಡಿಯೋಗಳು ವಾಟ್ಸ್‌ಆ್ಯಪ್, ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿದ್ದು, ಜನರು ಮತ್ತಷ್ಟು ಭಯಭೀತರಾಗಿದ್ದಾರೆ. ಸ್ಥಳೀಯರು ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಸ್ಥಳದಲ್ಲಿ ಪರಿಶೀಲನೆ ನಡೆಸಿದರೂ ಚಿರತೆಯ ಹೆಜ್ಜೆ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಹಿಂದಿರುಗಿದ್ದಾರೆ ಎನ್ನಲಾಗಿದೆ.
ವೈರಲ್ ಆಗುತ್ತಿರುವ ಫೋಟೋ ಮೇನಾಲದ್ದು ಎಂಬುವುದಕ್ಕೆ ಯಾವುದೇ ಸ್ಪಷ್ಟತೆ ಇಲ್ಲ.

 

Leave a Reply

Your email address will not be published. Required fields are marked *

error: Content is protected !!