ಪುತ್ತೂರು ಸರಕಾರಿ ಆಸ್ಪತ್ರೆಯನ್ನು ಮೆಡಿಕಲ್ ಕಾಲೇಜು ಆಸ್ಪತ್ರೆಯ ಅಧೀನಕ್ಕೊಳಪಡಿಸಲು ಆಗ್ರಹ: ಆರೋಗ್ಯ ಸಚಿವ ಯು ಟಿ ಖಾದರ್‌ಗೆ ಶಾಸಕ ಅಶೋಕ್ ರೈ ಮನವಿ
ಪುತ್ತೂರು: ಪುತ್ತೂರಿನ ಸರಕಾರಿ ಆಸ್ಪತ್ರೆಯನ್ನು ಪುತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಯ ಅಧೀನಕ್ಕೊಳಪಡಿಸುವಂತೆ ಶಾಸಕ ಅಶೋಕ್‌ರೈ ಅವರು ರಾಜ್ಯ ಆರೋಗ್ಯ ಸಚಿವ ಯು ಟಿ ಖಾದರ್ ಅವರಿಗೆ ಮನವಿ ಮಾಡಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ಈಗಾಗಲೇ ಮೆಡಿಕಲ್ ಕಾಲೇಜು ಪ್ರಾರಂಭಕ್ಕೆ ಎಲ್ಲಾ ಸಿದ್ದತೆಗಳು ನಡೆಯುತ್ತಿದೆ. ೨೦೨೭ ರಲ್ಲಿ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭವಾಗಲಿದ್ದು ಅದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳು ಸಮರೋಪಾದಿಯಲ್ಲಿ ನಡೆಯುತ್ತಿದೆ. ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣವಾಗುತ್ತಿರುವ ಹಂತದಲ್ಲೇ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಪ್ರವೇಶಾತಿಯೂ ಆರಂಭವಾಗಿ ಕಾಲೇಜು ಪ್ರಾರಂಭವಾಗಲಿದೆ. ಇದಕ್ಕಾಗಿ ಪುತ್ತೂರು ಸರಕಾರಿ ಆಸ್ಪತ್ರೆಯನ್ನು ಮೆಡಿಕಲ್ ಆಸ್ಪತ್ರೆಯ ಅಧೀನಕ್ಕೊಳಪಡಿಸುವಂತೆ ಮನವಿಯಲ್ಲಿ ವಿನಂತಿಸಿದ್ದಾರೆ.
ಸರಕಾರಿ ಆಸ್ಪತ್ರೆಯನ್ನು ಅಧೀನಕ್ಕೊಳಪಡಿಸುವುದರ ಜೊತೆಗೆ ಸ್ಕ್ಯಾನಿಂಗ್, ಬ್ಲಡ್ ಬ್ಯಾಂಕ್, ಎಕ್ಸ್‌ರೇ ಕೇಂದ್ರ, ಮೆಡಿಕಲ್ ಲ್ಯಾಬ್ ಪ್ರಾರಂಭ ಮಾಡುವ ಬಗ್ಗೆಯೂ ಸಚಿವರ ಜೊತೆ ಶಾಸಕರು ಮಾತುಕತೆ ನಡೆಸಿದ್ದಾರೆ. ಶಾಸಕರ ಮನವಿಗೆ ಸಚಿವರು ಸ್ಪಂದಿಸಿದ್ದು ತಕ್ಷಣದ ಕ್ರಮದ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.





