ಕರಾವಳಿಕ್ರೈಂ

ಕೂಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಂಟೈನರ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು


ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು-ಉಡುಪಿ ರಸ್ತೆಯ ಕೂಳೂರಿನ ವಿ.ಆರ್.ಎಲ್. ಕಚೇರಿ ಎದುರು ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಮೃತರನ್ನು ಸುರತ್ಕಲ್ ಸಮೀಪದ ನಿವಾಸಿ ಸದಾನಂದ ಶೆಟ್ಟಿಗಾರ್ (46) ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ಜು.3ರಂದು ಸಂಜೆ ಸುಮಾರು 6:15 ರ ವೇಳೆಗೆ ಸದಾನಂದ ಶೆಟ್ಟಿಗಾರ್ ಅವರು ತಮ್ಮ ಸ್ಕೂಟರ್‌ನಲ್ಲಿ ಕೊಟ್ಟಾರ ಕಡೆಯಿಂದ ಉಡುಪಿ ಕಡೆಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಬರುತ್ತಿದ್ದ ಕಂಟೈನರ್ ಲಾರಿಯ ಚಾಲಕ ಮಹಮ್ಮದ್ ಅಜರುದ್ದೀನ್ ಎಂಬಾತ ತನ್ನ ವಾಹನವನ್ನು ಅತ್ಯಂತ ದುಡುಕುತನ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಕೆಳಗೆ ಬಿದ್ದಾಗ, ಕಂಟೈನರ್ ಲಾರಿಯು ಅವರ ಮೇಲೆ ಹರಿದಿದೆ. ಪರಿಣಾಮವಾಗಿ ತೀವ್ರ ಸ್ವರೂಪದ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!