ಕಡಬ: ಮದುವೆ ವಿಚಾರದಲ್ಲಿ ಯುವಕರ ನಡುವೆ ಗಲಾಟೆ; ಎರಡೂ ಕಡೆಯಿಂದ ದೂರು
ಕಡಬ: ಕಾಲೇಜು ರಸ್ತೆಯ ಜಂಕ್ಷನ್ ಬಳಿ ಹುಡುಗಿಯೊಬ್ಬಳ ಮದುವೆ ವಿಚಾರಕ್ಕೆ ಸಂಬಂಧಿಸಿ ಯುವಕರ ನಡುವೆ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯಿಂದ ಪ್ರತ್ಯೇಕ ದೂರುಗಳು ದಾಖಲಾಗಿವೆ.

ಕಡಬ ನಿವಾಸಿ ಮೋನಿಷ್ (21) ನೀಡಿದ ದೂರಿನ ಪ್ರಕಾರ, ಜುಲೈ 10ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಾಲೇಜು ರಸ್ತೆ ಜಂಕ್ಷನ್ ಬಳಿ ಶರತ್, ದೀಪಕ್ ಹಾಗೂ ವಿಶ್ವನಾಥ ಎಂಬವರು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ಘಟನೆಯ ಸಂಬಂಧ ಕುಟ್ರುಪ್ಪಾಡಿ ನಿವಾಸಿ ದೀಪಕ್ (33) ಅವರು ನೀಡಿದ ಪ್ರತಿದೂರಿನಲ್ಲಿ, ಮೋನಿಷ್ ತಮ್ಮನ್ನು ತಡೆದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಮತ್ತೊಂದು ಪ್ರಕರಣ ದಾಖಲಾಗಿದೆ. ಎರಡೂ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಕಡಬ ಪೊಲೀಸರು ತನಿಖೆ ಕೈಗೊಂಡಿದ್ದು, ತನಿಖೆಯ ಬಳಿಕ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.




