ಕರಾವಳಿಕ್ರೈಂ

ಪುತ್ತೂರಿನಲ್ಲಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಮಾನವ ಬಂಧುತ್ವ ವೇದಿಕೆಯಿಂದ ಮನವಿ



ಪುತ್ತೂರು: ಪುತ್ತೂರಿನಲ್ಲಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿರುವ ಸಮಾಜವಿರೋಧಿ ಶಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಾನವ ಬಂಧುತ್ವ ವೇದಿಕೆ ಪುತ್ತೂರು ವತಿಯಿಂದ ಸಹಾಯಕ ಆಯುಕ್ತರಿಗೆ ಜು.13ರಂದು ಮನವಿ ಸಲ್ಲಿಸಲಾಯಿತು.



ವೇದಿಕೆಯ ಪ್ರಾಂತ ಸಂಚಾಲಕ ಅಮಳ ರಾಮಚಂದ್ರ ನೇತೃತ್ವದಲ್ಲಿ ಸಲ್ಲಿಸಲಾದ ಮನವಿಯಲ್ಲಿ, ಜುಲೈ 8ರಂದು ಪುತ್ತೂರಿನ ಪುರುಷರಕಟ್ಟೆ ಪ್ರದೇಶದಲ್ಲಿ ನಡೆದ ಘಟನೆಯನ್ನು ನೆಪವನ್ನಾಗಿ ಮಾಡಿಕೊಂಡು ಕೆಲ ಸಮಾಜವಿರೋಧಿ ಹಾಗೂ ಕೋಮುವಾದಿ ಶಕ್ತಿಗಳು ಕೋಮು ಉದ್ವಿಗ್ನತೆ ಸೃಷ್ಟಿಸಲು ಪ್ರಯತ್ನಿಸುತ್ತಿರುವುದು ನಂತರದ ಬೆಳವಣಿಗೆಗಳಿಂದ ಗೋಚರಿಸುತ್ತಿದೆ ಎಂದು ಆರೋಪಿಸಲಾಗಿದೆ.

 



ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಭಯ ಪಕ್ಷಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ, ಕೆಲವು ಸಂಘಟನೆಗಳು ಪ್ರಕರಣದ ಕುರಿತು ತಿರುಚಿದ ಮಾಹಿತಿಯನ್ನು ಸಾರ್ವಜನಿಕರಲ್ಲಿ ಹರಡಲು ಪ್ರಯತ್ನಿಸುತ್ತಿವೆ. ಇದರಿಂದ ವಿವಿಧ ಸಮುದಾಯಗಳ ನಡುವೆ ಅಪನಂಬಿಕೆ, ಭಯ ಮತ್ತು ಉದ್ವಿಗ್ನ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.



ಆದ್ದರಿಂದ, ಜಿಲ್ಲೆಯ ಶಾಂತಿ, ಸೌಹಾರ್ದತೆ ಮತ್ತು ಸಾರ್ವಜನಿಕ ನೆಮ್ಮದಿಯನ್ನು ಕಾಪಾಡುವ ದೃಷ್ಟಿಯಿಂದ ದ್ವೇಷ ಮತ್ತು ಉದ್ವಿಗ್ನತೆಯನ್ನು ಪ್ರಚೋದಿಸುವವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಸಹಾಯಕ ಆಯುಕ್ತರನ್ನು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರ. lಸಂಚಾಲಕ ಅಮಳ ರಾಮಚಂದ್ರ, ಸಹಸಂಚಾಲಕರಾದ
ಮೌರಿಸ್ ಮಸ್ಕರೇನ್ಹಸ್, ಉಲ್ಲಾಸ್ ಕೋಟ್ಯಾನ್,
ಮಹಮ್ಮದ್ ರಿಯಾಝ್, ಸಮಿತಿ ಸದಸ್ಯರಾದ ಝುಬೈರ್ ಪಿ.ಕೆ, ಸಲೀಂ ಮಾಯಂಗಳ, ಬಷೀರ್ ಮುಕ್ವೆ,
ಜಮಾಲ್ ಎಂ.ಜಿ.ರೋಡ್, ಮುಬೀನ್ ಇಂದಿರಾ ನಗರ, ಶರೀಫ್ ಇಂದಿರಾನಗರ,ಚಂದ್ರಶೇಖರ ಕುರಿಂಜ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!