ಕರಾವಳಿ

ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ


ಪುತ್ತೂರು: ದ ಕ ಹಾಗೂ ಉಡುಪಿ ಜಿಲ್ಲೆಯ ಕಂಬಳ ಸಮಿತಿಗೆ ಸರಕಾರದಿಂದ ತಲಾ 5 ಲಕ್ಷ ರೂ ಮಂಜೂರುಗೊಂಡಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ದ ಕ ಜಿಲ್ಲೆಯ 23 ಕಂಬಳ ಗಳಿಗೆ ಒಟ್ಟು 1.15 ಕೋಟಿ ಬಿಡುಗಡೆಯಾಗಿದೆ.


ಕಂಬಳಕ್ಕೆ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಕಳೆದ ಬಾರಿ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ವಿಧಾನಸಭಾ ಅಧಿವೇಶನದಲ್ಲೂ ಕಂಬಳಕ್ಕೆ ಸರಕಾರ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದರು. ಕರ್ನಾಟಕ ಸರಕಾರದ ಪ್ರವಾಸೋಧ್ಯಮ ಇಲಾಖೆಯ‌ ಮೂಲಕ ಈ ಅನುದಾನ ಬಿಡುಗಡೆಯಾಗಿದೆ. ಶಾಸಕ ಅಶೋಕ್ ರೈ ಅವರ ನಿರಂತರ ಪ್ರಯತ್ನದ ಫಲವಾಗಿ ಉಭಯ ಜಿಲ್ಲೆಗಳ ಕಂಬಳಕ್ಕೆ ತಲಾ 5 ಲಕ್ಷ ಅನುದಾನ ಮಂಜೂರುಗೊಂಡಿದೆ.

 



ದ ಕ ಮತ್ತು ಉಡುಪಿ ಜಿಲ್ಲೆಯ ಸುಮಾರು 23 ಕಂಬಳಕ್ಕೆ 1.15 ಕೋಟಿ ಅನುದಾನ ಮಂಜೂರಾಗಿದೆ. ಕಂಬಳಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಅನುದಾನ ನೀಡಲಾಗಿದೆ. ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ಸಿದ್ದತೆ ನಡೆಸುತ್ತಿರುವಾಗಲೇ ಈ ಅನುದಾನ ಮಂಜೂರುಗೊಂಡಿರುವುದು ಅತ್ಯಂತ ಸಂತಸವನ್ನು ತಂದಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!