ಕರಾವಳಿ

ಶಾಸಕ ಅಶೋಕ್ ರೈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಆರೋಪ:
ಮಹೇಶ್ ವಿಕ್ರಂ ಹೆಗಡೆ ವಿರುದ್ದ ಪೊಲೀಸರಿಗೆ ದೂರು


ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಪುತ್ತೂರು ಶಾಸಕರನ್ನು ಅವಹೇಳನಕಾರಿಯಾಗಿ ಚಿತ್ರಿಸಿ, ರಾಜ್ಯ ಸರಕಾರ ಮತ್ತು ಗೃಹ ಸಚಿವರ ಬಗ್ಗೆ ತಪ್ಪು ಗ್ರಹಿಕೆ ಮೂಡಿಸುವ ರೀತಿಯಲ್ಲಿ ಪ್ರಚಾರ ಮಾಡಿದ ಆರೋಪದ ಮೇಲೆ ಮಹೇಶ್ ವಿಕ್ರಂ ಹೆಗಡೆ ಎಂಬವರ ವಿರುದ್ಧ  ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬ್ಲಾಕ್ ಸಾಮಾಜಿಕ ಜಾಲತಾಣದ ವತಿಯಿಂದ
ಪುತ್ತೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.


ಪುತ್ತೂರು ಬ್ಲಾಕ್ ಅಧ್ಯಕ್ಷರ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರು ಸುಪ್ರೀತ್ ಕಣ್ಣಾರಾಯ ಅವರು ಈ ದೂರು ನೀಡಿದ್ದಾರೆ. ದೂರಿನಲ್ಲಿ ಬಂಟ್ವಾಳದಲ್ಲಿ ನಡೆದ ಹೇಯ ಕೃತ್ಯಕ್ಕೆ ಪುತ್ತೂರು ಶಾಸಕರ ಕುಮ್ಮಕ್ಕು ಇದೆ ಎಂಬ ಅರ್ಥ ಬರುವಂತೆ ಬರಹಗಳು ಮತ್ತು ಭಾವಚಿತ್ರಗಳನ್ನು ದುರುಪಯೋಗಪಡಿಸಿಕೊಂಡು ಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಇದು ಜನರಲ್ಲಿ ಶಾಸಕರು, ಸರಕಾರ ಮತ್ತು ಗೃಹ ಮಂತ್ರಿಗಳ ಬಗ್ಗೆ ತಪ್ಪು ಕಲ್ಪನೆ ಮೂಡಿಸುತ್ತಿದೆ ಎಂದು ತಿಳಿಸಲಾಗಿದೆ.
ಆರೋಪಿ ವಿರುದ್ದ  ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ತಿಳಿಸಲಾಗಿದೆ.

 


ಈ ಸಂಧರ್ಭದಲ್ಲಿ ಪುಡಾ ಅಧ್ಯಕ್ಷರಾದ ಅಮಳ ರಾಮಚಂದ್ರ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ರವಿಪ್ರಸಾದ್ ಶೆಟ್ಟಿ, ಶರೋನ್ ಸಿಕ್ವೇರಾ, ಸೌರಭ್ ರೈ, ಸಾಮಾಜಿಕ ಜಾಲತಾಣದ ಪುತ್ತೂರು ಬ್ಲಾಕ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಪೃಥ್ವಿರಾಜ್, ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ರಾಮಣ್ಣ ಪಿಲಿಂಜ, ಪ್ರಚಾರ ಸಮಿತಿಯ ಅದ್ಯಕ್ಷರಾದ ಅಮರನಾಥ ಗೌಡ, ಬ್ಲಾಕ್ ಕಾರ್ಯದರ್ಶಿ ಗಂಗಾದರ್ ಶೆಟ್ಟಿ ಎಲಿಕ್ಕ, ವಲಯಾಧ್ಯಕ್ಷರಾದ ಧೀರಜ್ ಗೌಡ ಕೊಡಿಪ್ಪಾಡಿ ಮತ್ತು ಗಿರೀಶ್ ರೈ ಆರ್ಯಪು , ಅಶೋಕ್ ಪಾಯಸ್, ಪ್ರಶಾಂತ್ ಮುರಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!