ಕರಾವಳಿಕ್ರೈಂ

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣ- ಆರೋಪಿ ಅರೆಸ್ಟ್


ಉಪ್ಪಿನಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಬಂಧಿತ ಆರೋಪಿ.


ಬೆಳ್ತಂಗಡಿಯ 16 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ರಿಕ್ಷಾ ಚಾಲಕ ಶುಭರಾಜ್ ಪುಸಲಾಯಿಸಿ, ಬಲವಂತವಾಗಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದ ಎಂದು ದೂರಲಾಗಿದೆ.

ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಆಕೆಯ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿದಾಗ ಬಾಲಕಿ ಗರ್ಭಿಣಿ ಎಂದು ತಿಳಿದು ಬಂದಿದೆ. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಜು.18ರಂದು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

 



ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಆರೋಪಿ ಶುಭರಾಜ್ ನನ್ನು ಲಾಯಿಲ ಗ್ರಾಮದ ಪುತ್ರಬೈಲಿನಲ್ಲಿ ಜು.19 ರಂದು ಸಂಜೆ ಬಂಧಿಸಿ ವಿಚಾರಣೆ ನಡೆಸಿ ಜು.20ರಂದು ಮಂಗಳೂರು ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Leave a Reply

Your email address will not be published. Required fields are marked *

error: Content is protected !!