ಕರಾವಳಿ

ಬಂಟ್ವಾಳ: ಶಾಲಾ ಬಸ್ ಮೇಲೆ ಮರ ಬಿದ್ದು ವಿದ್ಯಾರ್ಥಿನಿ ದುರ್ಮರಣ, ಇಬ್ಬರು ವಿದ್ಯಾರ್ಥಿಗಳಿಗೆ ಗಾಯ


ಬಂಟ್ವಾಳ ಕಲ್ಲಡ್ಕ ಶ್ರೀರಾಮ ಶಾಲೆಯ ಬಸ್ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದು, ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ದುರ್ಘಟನೆ ಬುಧವಾರ ಸಂಜೆ ಬಂಟ್ವಾಳ ತಾಲೂಕಿನ ಬರೀಮಾರು ಗ್ರಾಮದ ಕಲ್ಲೇಟ್ಟಿ ದೈವಸ್ಥಾನದ ಸಮೀಪ ಸಂಭವಿಸಿದೆ.



ಪೊಲೀಸರ ಮಾಹಿತಿ ಪ್ರಕಾರ, ಜುಲೈ 22ರಂದು ಸಂಜೆ ಸುಮಾರು 5 ಗಂಟೆಗೆ, ಕಲ್ಲಡ್ಕ ಶ್ರೀರಾಮ ಶಾಲೆಯ ಬಸ್ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದ ವೇಳೆ, ಬರೀಮಾರು ಗ್ರಾಮದ ಕಲ್ಲೇಟ್ಟಿ ದೈವಸ್ಥಾನದ ಬಳಿ ಏಕಾಏಕಿ ಬೃಹತ್ ಗಾತ್ರದ ಮರ ಬಸ್ ಮೇಲೆ ಉರುಳಿಬಿದ್ದಿದೆ. ಪರಿಣಾಮ ಬಸ್‌ನಲ್ಲಿದ್ದ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

 



ಗಾಯಾಳು ವಿದ್ಯಾರ್ಥಿಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!