ಕರಾವಳಿ

ಆ.16: ಎಜುಕೇಷನಲ್ ಎಕ್ಸಲೆನ್ಸ್ ಫೌಂಡೇಶನ್ ವತಿಯಿಂದ ‘ಎಕ್ಸಲೆನ್ಸಿಯಾ-2026’ ಕಾರ್ಯಕ್ರಮ

ಎಜುಕೇಷನಲ್ ಎಕ್ಸಲೆನ್ಸ್ ಫೌಂಡೇಶನ್ ವತಿಯಿಂದ ‘ಎಕ್ಸಲೆನ್ಸಿಯಾ-2026’ ಕಾರ್ಯಕ್ರಮ ಆಗಸ್ಟ್ 16ರಂದು ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಲಿದೆ.
“Beyond Marks, Beyond Obstacles” ಎಂಬ ಘೋಷವಾಕ್ಯದಡಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ  ಶೈಕ್ಷಣಿಕ ಸಾಧಕರಿಗೆ ಸನ್ಮಾನ, ರ‍್ಯಾಂಕ್ ಗಳಿಸಿದ ವಿದ್ಯಾರ್ಥಿಗಳ ಯಶಸ್ಸಿನ ಪಯಣದ ಹಂಚಿಕೆ, ಗಣ್ಯರಿಂದ ಪ್ರೇರಣಾದಾಯಕ ಉಪನ್ಯಾಸ ಹಾಗೂ ಯುವಜನತೆಗೆ ಸ್ಪೂರ್ತಿ ತುಂಬುವ ವಿಶೇಷ ಅಧಿವೇಶನ ನಡೆಯಲಿದೆ.




ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು ಕಾರ್ಯಕ್ರಮವನ್ನು EEF ಕೌನ್ಸಿಲರ್ ಡಾ. ವಾಜಿದಾ ಬಾನು ನಡೆಸಿಕೊಡಲಿದ್ದಾರೆ. ಪ್ರೇರಣಾದಾಯಕ ಭಾಷಣಗಾರ ರಫೀಕ್ ಮಾಸ್ಟರ್ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಸಾರ್ವಜನಿಕರು  ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಎಜುಕೇಶನಲ್ ಎಕ್ಸೆಲೆನ್ಸ್ ಫೌಂಡೇಶನ್ ನ ಅಧ್ಯಕ್ಷ ಅಮ್ಜದ್ ಖಾನ್ ಪೊಳ್ಯ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!