ಕರಾವಳಿಕ್ರೈಂ

ಇಡ್ಕಿದು: ಮನೆಯ ಅಂಗಳದಿಂದ ಕಳ್ಳತನವಾಗಿದ್ದ ದ್ವಿಚಕ್ರ ವಾಹನ ಪತ್ತೆ!



ಬಂಟ್ವಾಳ: ತಾಲೂಕಿನ ಇಡ್ಕಿದು ನಿವಾಸಿ ಆನಂದ ಸಪಲ್ಯ  ಅವರಿಗೆ ಸೇರಿದ ದ್ವಿಚಕ್ರ ವಾಹನ ಕಳವು ಪ್ರಕರಣ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಜು.25ರಂದು ಸಂಜೆ ತಮ್ಮ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ (ಅಂದಾಜು ಮೌಲ್ಯ ₹30,000) ಮರುದಿನ ಬೆಳಿಗ್ಗೆ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ.
ವಾಹನವನ್ನು ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿ ಹಾಗೂ ಸ್ಥಳೀಯರಲ್ಲಿ ವಿಚಾರಿಸಿದರೂ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಆನಂದ ಸಪಲ್ಯ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

 

ಈ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 162/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಕಳುವಾದ ದ್ವಿಚಕ್ರ ವಾಹನ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸದ್ರಿ‌ ಪ್ರಕರಣಕ್ಕೆ ಸಂಬಂಧಿಸಿದ ದ್ವಿಚಕ್ರ ವಾಹನ ಬಿ.ಸಿ ರೋಡ್ ಬಳಿ ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!