ಚಿಕಿತ್ಸೆಯಿಂದ ಬಿಡುಗಡೆಯಾದ ಲಾವಣ್ಯ ಕೊಲೆ ಆರೋಪಿ ಪೊಲೀಸ್ ಕಸ್ಟಡಿಗೆ
ಬಂಟ್ವಾಳ: ಜುಲೈ 16ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಸಿ.ರೋಡ್‌ನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿ ನಡೆದ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿಯನ್ನು ಚಿಕಿತ್ಸೆಯಿಂದ ಬಿಡುಗಡೆಯಾದ ಬಳಿಕ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಯು ಜುಲೈ 28ರಂದು ಆಸ್ಪತ್ರೆಯಿಂದ ಬಿಡುಗಡೆಯಾದ ಹಿನ್ನೆಲೆಯಲ್ಲಿ, ಬಂಟ್ವಾಳ ನಗರ ಪೊಲೀಸರು ಆತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪ್ರಕರಣದ ಹೆಚ್ಚಿನ ತನಿಖೆ ನಡೆಸುವ ಉದ್ದೇಶದಿಂದ ನ್ಯಾಯಾಲಯವು ಆರೋಪಿಯನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಪ್ರಕರಣದ ಕುರಿತು ಬಂಟ್ವಾಳ ನಗರ ಠಾಣೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.





