ಕರಾವಳಿಕ್ರೈಂ

ಕಡಬ: ಪಾಲ್ಸ್  ಬಳಿ ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ, ಜೀವ ಬೆದರಿಕೆ–ಐವರ ವಿರುದ್ಧ ಪ್ರಕರಣ ದಾಖಲು



ಕಡಬ: ಕಡಬ ಕುಂಡಡ್ಕ ಪಾಲ್ಸ್‌ನಲ್ಲಿ ಅಪ್ರಾಪ್ತ ಬಾಲಕ ಹಾಗೂ ಆತನ ಸಹಪಾಠಿಗಳ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಐವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕನು ನಾಲ್ವರು ಸಹಪಾಠಿಗಳೊಂದಿಗೆ ಆ.03ರಂದು ಬೆಳಗ್ಗೆ ಕುಂಡಡ್ಕ ಪಾಲ್ಸ್‌ಗೆ ತೆರಳಿ ಆಟವಾಡುತ್ತಿದ್ದ ವೇಳೆ ಆರೋಪಿಗಳಾದ ರೋಹಿತ್, ದೇವಿಪ್ರಸಾದ್, ಚಂದನ್ ಹಾಗೂ ಉಮೇಶ್ ಮತ್ತು ವಿದ್ಯಾರ್ಥಿಗಳೊಂದಿಗೆ ಇದ್ದ ವಿದ್ಯಾರ್ಥಿನಿಯ ತಂದೆ ಸ್ಥಳಕ್ಕೆ ಬಂದಿದ್ದರು ಎನ್ನಲಾಗಿದೆ.



ಈ ವೇಳೆ ಆರೋಪಿಗಳು ಬಾಲಕನಿಗೆ ಅವಾಚ್ಯವಾಗಿ ಬೈದು, ಆತನ ಹಾಗೂ ಇಬ್ಬರು ಸಹಪಾಠಿ ಬಾಲಕರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಕುರಿತು ಆ.11ರಂದು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!