ಕರಾವಳಿ

ಆ.13: ಕಲ್ಲಡ್ಕದಲ್ಲಿ ವಾಹನ ಜಾಥಾಗೆ ಅನುಮತಿ ಪಡೆದಿಲ್ಲ, ನಿಯಮ ಉಲ್ಲಂಘಿಸಿ ನಡೆಸಿದರೆ ಕಾನೂನು ಕ್ರಮ: ಪೊಲೀಸ್ ಇಲಾಖೆ



ಬಂಟ್ವಾಳ: ಕಲ್ಲಡ್ಕದಲ್ಲಿ ಆಗಸ್ಟ್ 13ರಂದು ವಾಹನ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂಬ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯಲಾಗಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.


ಪೂರ್ವಾನುಮತಿ ಪಡೆಯದೆ ಹಾಗೂ ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ವಾಹನ ಜಾಥಾ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಿದಲ್ಲಿ, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.


ಸಾರ್ವಜನಿಕರು ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ, ಕಾರ್ಯಕ್ರಮ ಆಯೋಜಿಸಲು ಸಂಬಂಧಪಟ್ಟ ಇಲಾಖೆಯಿಂದ ಅಗತ್ಯ ಪೂರ್ವಾನುಮತಿ ಪಡೆಯಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಂಡು ಪಾಲ್ಗೊಳ್ಳುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

Leave a Reply

Your email address will not be published. Required fields are marked *

error: Content is protected !!