ಕರಾವಳಿ

ಮಗಳ ಅನುಮಾನಾಸ್ಪದ ಸಾವು: ಸೂಕ್ತ ತನಿಖೆಗೆ ತಾಯಿಯಿಂದ ಪೊಲೀಸ್ ಅಧೀಕ್ಷಕರಿಗೆ ಮನವಿ



ಪುತ್ತೂರು: ಕಲ್ಲುಗುಂಡಿ ಸಮೀಪದಲ್ಲಿ ಪತಿಯ ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಕೆದಂಬಾಡಿ ಗ್ರಾಮದ ಸಾರೆಪುಣಿಯ ಫಾತಿಮತ್ ನಿಶಾನಾ ಅವರ ಸಾವಿನ ಕುರಿತು ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಅವರ ತಾಯಿ ಜುಬೈದಾ ಅವರು ಆ.12ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ.

ಈ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮಗಳ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂಬ ಬಲವಾದ ಅನುಮಾನವಿದ್ದು, ಪ್ರಕರಣದ ಬಗ್ಗೆ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು ಎಂದು ಜುಬೈದಾ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಅರುಣ್ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!