ಕರಾವಳಿಕ್ರೈಂ

ಮಂಗಳೂರು: ದ್ವಿಚಕ್ರ ವಾಹನ ಕಳವು, ಆರೋಪಿ ಬಂಧನ



ಮಂಗಳೂರು: ಕಳೆದ ಜುಲೈನಲ್ಲಿ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಕ್ಕಲ್‌ನಲ್ಲಿ  ನಡೆದ ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.



ಕೋಡಿ ಉಳ್ಳಾಲದ ನ್ಯೂ ತೋಟ ಹೌಸ್ ನಿವಾಸಿ ಮುಹಮ್ಮದ್ ಫೈಝಲ್ ಯಾನೆ ತೋಟ ಫೈಝಲ್ (40) ಬಂಧಿತ ಆರೋಪಿ. ಈತನ ಬಳಿಯಿಂದ ಕಳವುಗೈದ ಸ್ಕೂಟರ್‌ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



ಕೋಡಿಕ್ಕಲ್ ಎಂಬಲ್ಲಿ ಮನೆಯೊಂದರ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಜುಲೈ 24ರಂದು ಕಳವಾಗಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿದಾಗ ದೊರೆತ ಮಾಹಿತಿಯಂತೆ ಆರೋಪಿ ಫೈಝಲ್‌ನ್ನು ಬಂಧಿಸಿದ್ದಾರೆ.
ಆರೋಪಿ ಫೈಝಲ್ ವಿರುದ್ದ ಕರ್ನಾಟಕ ಹಾಗೂ ಕೇರಳ ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 40ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!