ಕರಾವಳಿಕ್ರೈಂ

ಪೋಕ್ಸೋ ಪ್ರಕರಣದಲ್ಲಿ ಕುದ್ಮಾರು ನಿವಾಸಿ ಆರೋಪಿಗೆ ಶಿಕ್ಷೆ ಪ್ರಕಟ



ಪುತ್ತೂರು: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 12/2020ರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಡಬ ತಾಲೂಕು ಕುದ್ಮಾರು ನಿವಾಸಿ ಅಬ್ದುಲ್ಲಾ (64) ಅವರಿಗೆ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಗಳೂರು 5 ವರ್ಷಗಳ ಸಾಧಾರಣ ಕಾರಾಗೃಹ ಶಿಕ್ಷೆ ಹಾಗೂ ₹35,000 ದಂಡ ವಿಧಿಸಿದೆ.



354(A1), 506 ಐಪಿಸಿ ಹಾಗೂ ಕಲಂ 8 ಪೋಕ್ಸೋ ಕಾಯ್ದೆ-2012ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸುಮಂಗಲ ಚಕಲಬ್ಬಿ ಅವರು ಆರೋಪಿಯನ್ನು ದೋಷಿ ಎಂದು ತೀರ್ಪು ನೀಡಿ ಶಿಕ್ಷೆ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ.


ಪ್ರಕರಣದ ಅಂದಿನ ತನಿಖಾಧಿಕಾರಿ ಹಾಗೂ ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಅಭಿಯೋಜಕರಾದ ಪುಷ್ಪರಾಜ್ ಅವರು ಪ್ರಕರಣದ ಪರವಾಗಿ ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!