ಕರಾವಳಿಕ್ರೈಂ

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: ವ್ಯಕ್ತಿ ಬಂಧನ


ಬಂಟ್ವಾಳ: ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಆರೋಪದ ಮೇಲೆ  ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.



ಬಂಧಿತ ಆರೋಪಿಯನ್ನು ಬಂಟ್ವಾಳ, ಸರಪಾಡಿ ನಿವಾಸಿ ಜಯಂತ್ (47) ಎಂದು ಗುರುತಿಸಲಾಗಿದೆ. ದೂರುದಾರರಾದ ಮಹಿಳೆಯ 16 ವರ್ಷದ ಮಗಳು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕೆಲ ದಿನಗಳಿಂದ ಮಧ್ಯ ವಯಸ್ಕ ಅಪರಿಚಿತ ವ್ಯಕ್ತಿಯೊಬ್ಬಳು ಬಸ್ಸಿನಲ್ಲಿ ಸಂಚರಿಸುವ ವೇಳೆ ಆಕೆಯನ್ನು ಹಿಂಬಾಲಿಸುತ್ತಿದ್ದ ಎನ್ನಲಾಗಿದೆ.



ಆ. 19ರಂದು ಸಂಜೆ ಬಾಲಕಿ ಕಲ್ಲಡ್ಕ ಬಸ್ ನಿಲ್ದಾಣಕ್ಕೆ ಬಂದಾಗ, ಅದೇ ವ್ಯಕ್ತಿ ಅಲ್ಲಿಯೂ ಆಕೆಯನ್ನು ಗಮನಿಸುತ್ತಿದ್ದನು. ಇದರಿಂದ ಭಯಗೊಂಡ ಬಾಲಕಿ ತನ್ನ ತಾಯಿಯು ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ವಿಷಯ ತಿಳಿಸಿದ್ದಾಳೆ. ಬಳಿಕ ಆಕೆಯ ತಾಯಿ ಕಛೇರಿಯ ಮಾಲೀಕರೊಂದಿಗೆ ಬಸ್ ನಿಲ್ದಾಣಕ್ಕೆ ತೆರಳಿದಾಗ ಆರೋಪಿ ಅಲ್ಲಿಯೇ ಕಂಡು ಬಂದಿದ್ದಾನೆ. ವಿಚಾರಿಸಿದಾಗ ತನ್ನ ಹೆಸರು ಜಯಂತ್ ಎಂದು ತಿಳಿಸಿ ಅಲ್ಲಿಂದ ತೆರಳಿದ್ದಾನೆ.


ಈ ಕುರಿತು ನೀಡಿದ ದೂರಿನ ಮೇರೆಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ. 116/2026, ಕಲಂ 78 ಬಿಎನ್‌ಎಸ್ 2023 ಹಾಗೂ ಕಲಂ 12 ಪೋಕ್ಸೋ ಕಾಯ್ದೆ 2012ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಯಿತು.
ತನಿಖೆ ಮುಂದುವರಿಸಿದ ಪೊಲೀಸರು ಆರೋಪಿ ಜಯಂತ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!