ಪುತ್ತೂರು ದರ್ಬೆ ಘಟನೆ: ಮತ್ತೋರ್ವನ ವಿರುದ್ದ ಪ್ರಕರಣ ದಾಖಲು
ಪುತ್ತೂರು: ಆ.21ರಂದು ದರ್ಬೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಮಹಮ್ಮದ್ ನೌಶಾದ್ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ.

ಚಿಕ್ಕಮುಡ್ನೂರು ನಿವಾಸಿ ಮಹಮ್ಮದ್ ನೌಶಾದ್ (30) ಎಂಬಾತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 79/2024, ಕಲಂ 126(2), 352, 115(2), 351(2), 3(5) BNS, 2023 ರಂತೆ ಪ್ರಕರಣ ದಾಖಲಾಗಿದೆ.
ಈ ಪ್ರಕರಣಗಳಿಗೆ ಹೊರತಾಗಿ, ಆರೋಪಿತನ ವಿರುದ್ಧ ಬೇರೆ ಯಾವುದೇ ಪ್ರಕರಣಗಳು ದಾಖಲಾಗಿವೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.
ಪ್ರಸ್ತುತ ಮಹಮ್ಮದ್ ನೌಶಾದ್ ಅವರನ್ನು ದಸ್ತಗಿರಿ ಮಾಡಿರುವುದಿಲ್ಲ. ಘಟನೆಗೆ ಸಂಬಂಧಿಸಿದಂತೆ ಲಭ್ಯವಿರುವ ವಿಡಿಯೋ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಪರಿಶೀಲನೆಯ ಬಳಿಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


