ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ಪ್ರಕರಣದಲ್ಲಿ ಆರೋಪಿತನಾಗಿ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಕೇರಳ ಕಣ್ಣೂರು ನಿವಾಸಿ ಡೆನ್ನಿ ಜೋಸೆಫ್ @ ಆಂಟೋನಿ ಎಂಬಾತನನ್ನು ಆ.29ರಂದು ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಪಿಸಿ ಮುನಿಯ ನಾಯ್ಕ, ಪಿಸಿ ಮನು ನಾಯ್ಕ ರವರುಗಳು ಕೇರಳ ರಾಜ್ಯದ ಕಣ್ಣೂರು ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.



