ಕರಾವಳಿಕ್ರೈಂ

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಹಲವರ ವಿರುದ್ಧ ಪ್ರಕರಣ ದಾಖಲು



ಪುತ್ತೂರು: ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿಕೊಂಡು ಗಲಾಟೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸೆ.1ರಂದು ಮಧ್ಯಾಹ್ನ ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಕೆಲವರು ಗುಂಪು ಸೇರಿಕೊಂಡು ಗಲಾಟೆ ನಡೆಸುತ್ತಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಜಾನ್ಸನ್ ಡಿಸೋಜ ಅವರಿಗೆ ಮಾಹಿತಿ ಲಭಿಸಿತ್ತು.


ಮಾಹಿತಿ ಮೇರೆಗೆ ಪೊಲೀಸ್ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದಾಗ, ಕೆಲವರು ಪರಸ್ಪರ ಕೈಕೈ ಮಿಲಾಯಿಸಿಕೊಂಡು ಗಲಾಟೆ ನಡೆಸುತ್ತಾ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿರುವುದು ಕಂಡುಬಂದಿದೆ. ಪೊಲೀಸರು ಸ್ಥಳದಲ್ಲಿದ್ದವರಿಗೆ ತಿಳುವಳಿಕೆ ನೀಡಿ ಗಲಾಟೆ ನಿಲ್ಲಿಸುವಂತೆ ಸೂಚಿಸಿದರೂ, ಅವರು ಕಲಹ ಮುಂದುವರಿಸಿದರೆನ್ನಲಾಗಿದೆ.


ಈ ಹಿನ್ನೆಲೆಯಲ್ಲಿ ಮುಂಡೂರು ಗ್ರಾಮದ ಪ್ರವೀಣ್ ಆಚಾರ್ಯ, ಕೂರ್ನಡ್ಕದ ರವೂಫ್ ಹಾಗೂ ಬೋಳ್ವಾರಿನ ಹಕೀಂ ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 104/2026, ಕಲಂ 194(2) ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!