ಪುತ್ತೂರು: ಕುಸಿದು ಬಿದ್ದು ಕಾಲೇಜು ವಿದ್ಯಾರ್ಥಿ ಮೃತ್ಯು
ಪುತ್ತೂರು: ಕಾಲೇಜು ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ಸೆ.5ರಂದು ಅಪರಾಹ್ನ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ ರಮೇಶ್ ರೈ ಮತ್ತು ಯಶೋಧಾ ದಂಪತಿಯ ಪುತ್ರ ಶಮಿಕ್ ರೈ (20) ಎಂದು ತಿಳಿದು ಬಂದಿದೆ.
ಶಮಿಕ್ ರೈ ಪುತ್ತೂರಿನ ಖಾಸಗಿ ಕಾಲೇಜ್ನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು, ಜೊತೆಗೆ ಸಿಎ ಪರೀಕ್ಷೆಗೂ ಸಿದ್ಧತೆ ನಡೆಸುತ್ತಿದ್ದರು ಎನ್ನಲಾಗಿದೆ. ಕಳೆದ ಹಲವು ಸಮಯದಿಂದ ಶಮಿಕ್ ಜಿಮ್ಗೆ ಹೋಗುತ್ತಿದ್ದು ಎಂದಿನಂತೆ ಶನಿವಾರವೂ ಜಿಮ್ಗೆ ತೆರಳಿದ್ದು ಅಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದು ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಿದ್ದು, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.
ಆಸ್ಪತ್ರೆಗೆ ಶಾಸಕ ಅಶೋಕ್ ರೈ ಸಹಿತ ಹಲವರು ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು


