ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ (DCC) ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಪಕ್ಷದ ಪದಾಧಿಕಾರಿಗಳು ಚರ್ಚೆ ನಡೆಸಿ, ಸಂಘಟನೆಯ ಕುರಿತು ಸಮಗ್ರ ವರದಿ ಸಲ್ಲಿಸಿದ್ದರು. ಬಳಿಕ ಎಐಸಿಸಿ ವೀಕ್ಷಕರು ಹಾಗೂ ಹಿರಿಯ ನಾಯಕರ ಚರ್ಚೆಯ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ನೇಮಕಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.


