ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯ ಅ.ಕ್ರ. 18/2005, ಕಲಂ 4 ಮತ್ತು 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಕೌಕ್ರಾಡಿ ನಿವಾಸಿ ರಮೇಶ್ ಎಂಬಾತನು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಈತನ ವಿರುದ್ಧದ ವಾರಂಟ್ ಆಧಾರದ ಮೇಲೆ ಸೆ. 10, 2026ರಂದು ಉಪ್ಪಿನಂಗಡಿ ಠಾಣೆಯ ಸಿಬ್ಬಂದಿ ಹೆಚ್‌ಸಿ-508 ದಯಾನಂದ ಹಾಗೂ ಪಿಸಿ-453 ರವಿರಾಜ್ ಅವರು ನೆಲ್ಯಾಡಿ ಎಂಬಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.
ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


