ದ.ಕ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿಗೆ ವೇದನಾಥ ಸುವರ್ಣರಿಂದ ಅಭಿನಂದನೆ
ಪದ್ಮರಾಜ್ ನಾಯಕತ್ವದಲ್ಲಿ ಜಿಲ್ಲೆಯಲ್ಲಿ ಪಕ್ಷ ಇನ್ನಷ್ಟು ಸದೃಢವಾಗಿ ಬೆಳೆಯಲಿ-ವೇದನಾಥ ಸುವರ್ಣ
ಪುತ್ತೂರು: ದ.ಕ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಪದ್ಮರಾಜ್ ಆರ್ ಪೂಜಾರಿ ಅವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣ ನರಿಮೊಗರು ಅವರು ಸೆ.11ರಂದು ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.

ನಿಮ್ಮ ನಿಸ್ಪಾರ್ಥ ಸೇವೆ, ದಕ್ಷ ನಾಯಕತ್ವದ ಮೂಲಕ ಜಿಲ್ಲೆಯಲ್ಲಿ ಪಕ್ಷ ಇನ್ನಷ್ಟು ಸದೃಢವಾಗಿ ಬೆಳೆಯಲಿ, ಪಕ್ಷದ ಚಟುವಟಿಕೆ ಹಾಗೂ ಜನಸೇವೆ ಮಾಡಲು ಭಗವಂತನು ನಿಮಗೆ ಶಕ್ತಿ ನೀಡಲಿ ಎಂದು ಅವರು ಶುಭ ಹಾರೈಸಿದ ವೇದನಾಥ ಸುವರ್ಣ ಅವರು ನೀವು ಪಕ್ಷದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವುದು ಬಹಳ ಸಂತೋಷ ತಂದಿದೆ ಎಂದು ಹೇಳಿದರು


