ತಾಲೂಕಿನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಉದಯ್ ಕುಮಾರ್ ಗೆ ಮಸ್ಜಿದುನ್ನೂರ್ ಜುಮಾ ಮಸೀದಿಯಲ್ಲಿ ಸನ್ಮಾನ
ಬಂಟ್ವಾಳ: ತಾಲೂಕಿನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಉದಯ್ ಕುಮಾರ್ ಅವರನ್ನು ಮಸ್ಜಿದುನ್ನೂರ್ ಜುಮಾ ಮಸೀದಿ ಆಡಳಿತ ಸಮಿತಿ, ನೀರಪಾದೆ–ಬಾಳ್ತಿಲ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ನೀರಪಾದೆ ಮಸ್ಜಿದುನ್ನೂರ್ ಜುಮಾ ಮಸೀದಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಶಿಕ್ಷಣ ಕ್ಷೇತ್ರದಲ್ಲಿ ಉದಯ್ ಕುಮಾರ್ ಅವರು ಸಲ್ಲಿಸುತ್ತಿರುವ ಸೇವೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸರ್ವತೋಮುಖ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆಯನ್ನು ಶ್ಲಾಘಿಸಿದರು.
ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ದೊರೆತಿರುವುದು ನೀರಪಾದೆ ಹಾಗೂ ಸುತ್ತಮುತ್ತಲಿನ ಜನತೆಗೆ ಹೆಮ್ಮೆಯ ಸಂಗತಿ ಎಂದು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಮಸೀದಿ ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದು, ಉದಯ್ ಕುಮಾರ್ ಅವರಿಗೆ ಶುಭ ಹಾರೈಸಿದರು.


