ಸೆ.18: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ
ಪುತ್ತೂರು: ಇಂದು (ಸೆ.18)ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಷೆ ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯಾಗಿ ಅನುಮೋದನೆ, ಪುತ್ತೂರಿನ ಸರಕಾರಿ ಮೆಡಿಕಲ್ ಕಾಲೇಜು ಅನುಮೋದನೆ ಸೇರಿದಂತೆ ವಿವಿಧ ಯೋಜನೆಗಳು ನಾಳಿನ ಸಭೆಯಲ್ಲಿ ಅನುಮೋದನೆಗೊಳ್ಳುವ ಸಾಧ್ಯತೆಯಿದ್ದು ಆ ಬಳಿಕ ಸರಕಾರಕ್ಕೆ ಅಭಿನಂದನೆ ಸಲ್ಲಿಸುವ ಸಲುವಾಗಿ ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ವಿಜಯೋತ್ಸವ ಜಾಥಾ ನಡೆಯಲಿದೆ.

ಸಂಜೆ 4 ಗಂಟೆಗೆ ಬೊಳುವಾರಿನಿಂದ ಹೊರಟ ವಾಹನ ಜಾಥ ಮೊದಲಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಅಲ್ಲಿ ವಿಶೇಷ ಪೂಜೆ ಬಳಿಕ ದೇವಸ್ಥಾನದ ಗದ್ದೆಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಶಾಸಕರು ಮಾತನಾಡಲಿದ್ದಾರೆ. ಬಳಿಕ ಪುತ್ತೂರಿನ ಕೇಂದ್ರ ಜುಮಾ ಮಸೀದಿ ಹಾಗೂ ಮಾಯಿದೆದೇವುಸ್ ಚರ್ಚ್ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಿದ್ದಾರೆ.
ಕಳೆದ ಚುನಾವಣೆಯ ಸಂದರ್ಭದಲ್ಲಿ ತುಳುಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವುದಾಗಿ ಮತ್ತು ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಿಸುವುದಾಗಿ ಭರವಸೆ ಕೊಟ್ಟಿದ್ದರು. ಎರಡೂ ಭರವಸೆಗಳು ಏಕಕಾಲದಲ್ಲಿ ಈಡೇರಿದ್ದಕ್ಕಾಗಿ ಶಾಸಕರು ಈ ಜಾಥಾವನ್ನು ಆಯೋಜನೆ ಮಾಡಿದ್ದು ಸರ್ವ ಧರ್ಮ ಭಾಂಧವರು , ಕಾರ್ಯಕರ್ತರು, ಹಿತೈಷಿಗಳು, ಅಭಿಮಾನಿಗಳು ಭಾಗವಹಿಸುವಂತೆ ಶಾಸಕರು ವಿನಂತಿಸಿದ್ದಾರೆ.


