ಕರಾವಳಿ

ಧರ್ಮಸ್ಥಳ: ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ -ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು


ಧರ್ಮಸ್ಥಳ: ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಇಬ್ಬರು ಯುವಕರು ಪೂರ್ವಾನುಮತಿ ಪಡೆಯದೇ ಪ್ರವೇಶಿಸಿ ವಿಡಿಯೋ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಸ್ಥಳೀಯರು ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.


ಈ ಹಿನ್ನೆಲೆಯಲ್ಲಿ, ಪೂರ್ವಾನುಮತಿ ಪಡೆಯದೇ ರಕ್ಷಿತಾರಣ್ಯ ಪ್ರವೇಶಿಸಿದ ಆರೋಪದಡಿ ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯು ದೂರು ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.


ಇಬ್ಬರು ಯುವಕರು ಠಾಣೆಗೆ ಬಂದ ಸಂದರ್ಭದಲ್ಲಿ, ತಮ್ಮ ಮೇಲೆ ಯಾವುದೇ ಹಲ್ಲೆ ಅಥವಾ ತೊಂದರೆ ಉಂಟಾಗಿದ್ದಲ್ಲಿ ದೂರು ನೀಡುವಂತೆ ಪೊಲೀಸರು ಸೂಚಿಸಿದ್ದಾರೆ. ಈ ಕುರಿತು ಚರ್ಚಿಸಿ, ಅಗತ್ಯವಿದ್ದಲ್ಲಿ ದೂರು ನೀಡುವುದಾಗಿ ಯುವಕರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸದ್ಯ ಯಾವುದೇ ದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!