ಜ್ಞಾನೇಶ್ ಕುಮಾರ್ರನ್ನು ಬಂಧಿಸಿ: ಇತ್ತೀಚಿನ ಚುನಾವಣೆಗಳನ್ನು ರದ್ದುಗೊಳಿಸಿ-ಕೇಜ್ರಿವಾಲ್ ಆಗ್ರಹ
ಹೊಸದಿಲ್ಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಿರ್ಧಾರಕ್ಕೆ ಸಂಬಂಧಿಸಿದಂತೆ ಇಬ್ಬರು ಚುನಾವಣಾ ಆಯುಕ್ತರು ಕಳೆದ ಹತ್ತು ತಿಂಗಳಲ್ಲಿ ಕನಿಷ್ಠ 14 ಬಾರಿ ಆಕ್ಷೇಪಣೆಯನ್ನು ಸಲ್ಲಿಸಿರುವ ವಿಚಾರ ವರದಿಯಾದ ಬೆನ್ನಲ್ಲೇ ಮಾಜಿ ಸಿಎಂ ಅರವಿಂದ ಕೇಜ್ರವಾಲ್ ಪ್ರತಿಕ್ರಿಯಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ವರದಿ ಹಿನ್ನೆಲೆಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್, ಜ್ಞಾನೇಶ್ ಕುಮಾರ್ ಭಾರತೀಯ ಚುನಾವಣಾ ಆಯೋಗವನ್ನು ಒಬ್ಬರೇ ನಡೆಸುತ್ತಿದ್ದರು ಎಂದು ಆರೋಪಿಸಿದರು.’ಮೂರು ವರ್ಷಗಳ ಹಿಂದಿನ ಮತದಾರರ ಪಟ್ಟಿಯನ್ನು ಮರುಸ್ಥಾಪಿಸಬೇಕು ಹಾಗೂ ದಿಲ್ಲಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ ಸೇರಿದಂತೆ ಇತರ ರಾಜ್ಯಗಳ ವಿಧಾನಸಭೆಗಳಿಗೆ ಮರುಚುನಾವಣೆ ನಡೆಸಬೇಕು” ಎಂದೂ ಅವರು ಆಗ್ರಹಿಸಿದರು.



